ಗೌರವಾನ್ವಿತ ನ್ಯಾಯಮೂರ್ತಿ ಶ್ರೀ. ಕೆ.ಸೋಮಶೇಖರ್
ಮಾನ್ಯ ಶ್ರೀ ನ್ಯಾಯಮೂರ್ತಿ ಕೆ.ಸೋಮಶೇಖರ್ ರವರು 15.09.1963ರಂದು ಜನಿಸಿದರು. 27.01.1990 ರಂದು ವಕೀಲರಾಗಿ ನೋಂದಾಯಿಸಿಕೊಂಡರು ಹಾಗು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗಗಳಲ್ಲಿ ಅಭ್ಯಾಸ ಮಾಡಿದರು. 17.06.1998 ರಂದು ನೇರವಾಗಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡರು.
ಇವರು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಿಜಾಪುರ (ವಿಜಯಪುರ) ಮತ್ತು ಸಿಟಿ ಸಿವಿಲ್ ನ್ಯಾಯಾಲಯ, ಬೆಂಗಳೂರು ನಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಉತ್ತರ ಕನ್ನಡ, ಕಾರವಾರ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಿತ್ರದುರ್ಗ ಮತ್ತು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ್ದಾರೆ. ಇವರು ಕರ್ನಾಟಕ ಉಚ್ಚ ನ್ಯಾಯಾಲಯ,ಬೆಂಗಳೂರಿನಲ್ಲಿ ರಿಜಿಸ್ಟ್ರಾರ್ ವಿಜಿಲೆನ್ಸ್ ಮತ್ತು ರಿಜಿಸ್ಟ್ರಾರ್ (ನ್ಯಾಯಾಂಗ) ಆಗಿ ಸೇವೆ ಸಲ್ಲಿಸಿದ್ದಾರೆ. 14.11.2016 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ಮತ್ತು 03.11.2018 ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ..